ಮಡಿವಾಳ ಮಾಚಿದೇವ ಒನ್ನ ದೊಡ್ಡ ಅವತಾರಿ ಪುರುಷ. ದಕ್ಷನನ್ನು ಸಂಹಾರ ಮಾಡಿ ಅತಿ ಉತ್ಸಾಹದಿಂದ ಶಿವನನ್ನು ಕಾಣಲು ವೀರಭದ್ರ ಶಿವನ ಸಭೆಯೊಳಗೆ ನಡೆದು ಬರುತ್ತಾನೆ. ಸಭೆಯಲ್ಲಿರುವ ಶಿವ ಭಕ್ತನಿಗೆ ಈತನ ಉತ್ತರೀಯ ಸೆರಗು ತಾಕುತ್ತದೆ. ವಿಜಯದ ಉದ್ವೇಗದಲ್ಲಿ ಆದ ಆ ತಪ್ಪಿಗೆ, ಭೂಲೋಕದಲ್ಲಿ ಮಡಿವಾಳನಾಗಿ ಜನಿಸಿ ಶರಣರ ವಸ್ತ್ರಗಳನ್ನು ಮಡಿ ಮಾಡುವ ಕಾಯಕ ಪೂರೈಸಿ ದೋಷ ಮುಕ್ತನಾಗಿ ಬರುವಂತೆ ಶಿವನ ಆದೇಶವಾಗುತ್ತದೆ. ಮಾಚಿದೇವರನ್ನು ವೀರ ಭದ್ರನ 'ದೇವಾಂಶ ಸಂಭೂತ ಅವತಾರ ಪುರುಷನೆಂದು' ನಿರೂಪಿಸುವುದು ಸಾಮಾನ್ಯ ರೂಢಿಯಾಗಿದೆ..
ಆ ಶತಮಾನದಲ್ಲಿ ಶರಣರ ಬರಮೆಗೆ ಕಾಲಗಟ್ಟ ಫಲಪ್ರಧವಾಗಿತ್ತು. ಅಂತಹ ಸಂದರ್ಭದಲ್ಲಿ ಮಾಚೀದೇವನೆಂಬ ಶರಣನ ಉದಯಿಸಿದ ಕಿರಣ ಬಿಜಾಪುರ ಜಿಲೆಯ ಸಿಂಧಗಿ ತಾಲೂಕಿನ 'ದೇವರ ಹಿಪ್ಪರಗಿಯಲ್ಲಿ' ಪರುವತಯ್ಯ ಸುಜ್ನಾನವ್ವ ದಂಪತಿಗಳ ಪುತ್ರ ರತ್ನ ಶರಣ ಕಿರಣ ಮಡಿವಾಳ ಮಾಚಿದೆವರು ಜನಿಸಿದ್ದು ಕ್ರಿ .ಶ ೧೧೨೦-೧೧೩೦ ರ ನಡುವೆ.
ಎಲ್ಲರ ಬಾಳಿನಲ್ಲಿ ಗುರುವಿನ ಪ್ರವೇಶವಾದಂತೆ ಮಡಿವಾಳ ಮಾಚಿದೇವನ ಬಾಳಿನಲ್ಲಿಯೂ ಕ್ರಾಂತಿಕಾರಿ ಗುರುವಿನ ಬೋಧನೆ. ಪ್ರಾರಂಭವಾಗುತ್ತದೆ. ಮಾಚಿದೇವರ ವ್ಯಾಸಂಗ ಅಪಾರ ಜ್ಞಾನವನ್ನು ಅವಲೋಕಿಸಿದಾಗ ಉತ್ತಮ ಗುರುಗಳ ಬೋಧನೆ ಸಿಕ್ಕಿದ್ದು ಮನವರಿಕೆಯಾಗುತ್ತದೆ. ಶೂದ್ರರಿಗೆ ಶಿಕ್ಷಣ ನಿಷೇಧಿಸಲ್ಪಟ್ಟ ಕಾಲದಲ್ಲಿ ಅಕ್ಷರ ಜ್ಞಾನ ಸಕಲ ಶಾಸ್ತ್ರಗಳನ್ನು ಹೇಳಿಕೊಟ್ಟ ಗುರು ' ಮಲ್ಲಿಕಾರ್ಜುನಯ್ಯ ಸ್ವಾಮಿಗಳು' ನಿಜಕ್ಕೂ ಒಬ್ಬ ಕ್ರಾಂತಿಕಾರಿ ಗುರುಗಳೆಂಬುದು ಸ್ಪುಷ್ಟವಾಗುತ್ತದೆ..
ಕಾಯಕ ಹಿಮಾಚಲ ಮಾಚಯ್ಯ ಹುಟ್ಟಿನಿಂದಲೂ ಮಡಿವಾಳನಾಗಿದ್ದು, ಅಚಲ ಕಾಯಕ ನಿಷ್ಟನಾಗಿದ್ದ , ಹಿಮಾಲಯದಷ್ಟು ಧೃಢನಾಗಿದ್ದ , ತನ್ ಕಾಯಕವೇ ಭಕ್ತಿ, ಜೀವನದುಸಿರು ಎಂದು ನಂಬಿದ್ದ. ಜಂಗಮ ವೇಷದಲ್ಲಿ ಬಂದ ಶಿವನ ಬಟ್ಟೆಗಳನ್ನು ಆತನ ಷರತ್ತಿನ ಮೇರೆಗೆ ತನ್ನ ಹೆಂಡತಿ 'ಮಲ್ಲಿಗೆಮ್ಮಳ' ಎದೆ ಬಗೆದ ರಕ್ತದಲ್ಲಿ ಒಗೆದು ಒಣಗಿಸಿಕೊಂಡು ಬಂದ ಸಂದರ್ಭದ ದಂತ ಕಥೆ ಹಿಮಾಚಲಕ್ಕಿಂತಲೂ ಗಟ್ಟಿ ಕಾಯಕದ ಹಿರಿಯಾಳು ಮಾಚಿದೇವನಾಗಿದ್ದ ಎಂಬುದನ್ನು ತಿಳಿಸುತ್ತದೆ. ಶಿವಶರಣರ ಹಾಗೂ ಕಾಯಕದಲ್ಲಿ ನಿಷ್ಠೆಯುಳ್ಳ ಮೈಲಿಗೆಯ ಬಟ್ಟೆಗಳನ್ನು 'ಮಡಿ' ಮಾಡಿ ಮುಟ್ಟಿಸುವ ಕಾಯಕ ಇವರಾದಗಿತ್ತು .
ಮಡಿ ಬಟ್ಟೆ ಹೊತ್ತುಕೊಂಡು 'ವೀರ ಘಂಟೆ' ಬಾರಿಸುತ್ತ , ಭಕ್ತರಲ್ಲದವರು ತಮ್ಮನ್ನು ಮುಟ್ಟಬಾರದೆಂದು ನಿಯಮವನ್ನು ವಿಧಿಸಿಕೊಂಡಿದ್ದರು ಕುಚೇದ್ಯಕ್ಕೆ ಬಂದು ಮುಟ್ಟುವ ಭವಿಗಳನ್ನು ತುಂಡರಿಸಿ ಚೆಲ್ಲುತ್ತ ಮುನ್ನಡೆಯುವುದು ಮಾಚಿದೇವರ ನಡತೆಯಾಗಿತ್ತು. ಭವಿಯೋರ್ವ ಮಡಿ ಗಂಟು ಮುಟ್ಟಿ ಮೈಲಿಗೆಗೊಳಿಸಿದ್ದಕ್ಕೆ ಆತನ ಶಿರವನ್ನು ಆಕಾಶಕ್ಕೆ ತೂರಿದ ಘಟನೆಯಿಂದಾಗಿ, ಭಕ್ತಿ ಭಾವದಿಂದ ಮಡಿವಾಳಯ್ಯನನ್ನು ಜನರು ಗೌರವಿಸುತ್ತಿದ್ದರು. ಕಾಯಕ ಮಾಡದ ಸೋಮಾರಿಗಳ ಬಡವರನ್ನು ಶೋಷಿಸುವ ಸೋಮಾರಿಗಳ ದುರ್ಗುಣವುಳ್ಳವರ ಬಟ್ಟೆಗಳನ್ನೆಂದು ಆತ ಮುಟ್ಟುತ್ತಿರಲಿಲ್ಲ. 'ಅರಸುತನ ಮೇಲಲ್ಲ ಅಗಸತನ ಕೀಳಲ್ಲ ' ಎಂಬುದನ್ನು ಜನಕ್ಕೆ ಸಾರಿದರು. ಉನ್ನತ ವ್ಯಕ್ತಿತ್ವ. ಮಡಿವಾಳ ಮಾಚಿದೇವರ ಬಗ್ಗೆ ಹಲವು ಐತಿಹ್ಯಗಳು ಪ್ರಚಾರದಲಿ ಇವೆ. ಅವುಗಳಲ್ಲಿ ಕೆಲವು ಜೀವನದ ಅತ್ಯಂತ ಕೂತುಹಲ ನೀಡುವ ಪ್ರಸಂಗಗಳಾಗಿವೆ.
ಮೊದಲನೆಯ ಪ್ರಸಂಗ. ನುಲಿಯ ಚಂದಯ್ಯ ತನ್ನ ಕಾಯಕಕ್ಕೆ ಬೇಕಾದ ಹುಲ್ಲನ್ನು ಕೆರೆಯಲ್ಲಿ ಕುಯ್ಯುತ್ತಿದ್ದಾಗ ಧರಿಸಿದ 'ಇಷ್ಟ ಲಿಂಗ ' ಜಾರಿ ಕೆರೆಯೊಳಗೆ ಬೀಳುತ್ತದೆ. ಜಾರಿ ಬಿದ್ದ ಲಿಂಗ ಮತ್ತೇಕೆ? ಭಾವ ಲಿಂಗವೊಂದನ್ನೇ ಪೂಜಿಸಿದರೆ ಸಾಕೆಂದು ಹುಲ್ಲಿನ ಹೊರೆ ಹೊತ್ತು ಮನೆಗೆ ಮರಳುವನು. ಆಗ ಲಿಂಗದೇವ, ಮಾಚಿದೇವರ ಮೊರೆ ಹೋಗುತ್ತಾನೆ. ಮಾಚಿ ತಂದೆಗಳು 'ಸವಿ ಬೇಕು ಹಣ್ಣು ಬೇಡವೆಂದರೆ' ಹೇಗೆ? ಗುರು ಪೂಜೆ ಅರಿದೊಡೆ ಲಿಂಗ ಪೂಜೆ ಬಿಡಲಾಗದೆಂದು ಚಂದ್ರಯ್ಯನವರ ತಪ್ಪನ್ನು ಅರಿವನ್ನುಂಟುಮಾಡುವರು ಅದೊಂದು ದಿವ್ಯ ಪ್ರಸಂಗ.
ಎರಡನೆಯ ಪ್ರಸಂಗ. 'ಬೇಡುವ ಭಕ್ತರಿಲ್ಲದೆ ಬಡವನಾದೆನೆಂಬ' ಬಸವಣ್ಣನವರು 'ಅಹಂ' ಭಾವನೆಯಿಂದ ಮಾತನಾಡಿರುತ್ತಾರೆ, ಆಗ ಮಾಚಿದೆವರು ಬಸವಣ್ಣನವರಿಗೆ ' ನೀವೊಬ್ಬರೇ ದಾನ ಮಾಡಲು ಹುಟ್ಟಿದ ದಾನಿಗಳು , ಉಳಿದೆಲ್ಲ ಭಕ್ತರು ಭಿಕಾರಿಗಳು, ದರಿದ್ರರೆ'? ಎಂದು ಪ್ರಶ್ನಿಸುತ್ತಾರೆ. ಮುಂದೆ ಎನ್ನ ಮಹಾನುಭಾವರ ಬಡತನದಿರವ ನಿನಗೆ ತೋರುವೆನೆಂದು ಪಾದದಿಂದ ನೀರನ್ನು ಚಿಮ್ಮಲು ಆ ನೀರು ಹನಿಗಳೆಲ್ಲ ಮುತ್ತು ರತ್ನಗಳಾದವು. ಹೀಗೆ ವಿನಯ, ಇಂದ್ರಿಯ ನಿಗ್ರಹ, ನಿರಹಂಕಾರಗಳು ಭಕ್ತಿಯ ಕುರುಹು ಎಂದು ತಿಳಿಸುತ್ತ ಅಹಂಕಾರ ನಿರ್ಮೂಲನೆಗೊಳಿಸಿದ.
ಮೂರನೆಯ ಪ್ರಸಂಗ. ಮತ್ತೊಂದು ಸಂದರ್ಭದಲ್ಲಿ ಮೇದರ ಕೇತಯ್ಯ ಬಿದಿರು ಕಡಿಯುವಾಗ ಕೆಳಗೆ ಬೀಳುತ್ತಾನೆ. ಎದೆಗೆ ಬಿದಿರು ಮೊಳೆ ಚುಚ್ಚಿ ಕೇತಯ್ಯ ಶಿವ ಸನ್ನಿಧಿ ಸೇರುತ್ತಾನೆ. ಆಗ ಬಸವಣ್ಣ ಮಾಚಯ್ಯನನ್ನು ಕರೆಸುವನು, ಮಾಚಯ್ಯ ಬಂದು ಶಿವಶರಣರ ಪ್ರಾಣವೇ ತನ್ನ ಪ್ರಾಣವೆಂದು ನಂಬಿದ ಬಸವಣ್ಣ ಇನ್ನೂ ಜೀವಂತವಾಗಿದ್ದು ತನ್ನ ವಚನ ಪಾಲಿಸಿಲ್ಲವೆಂದ. ಇದನ್ನರಿತ ಬಸವಣ್ಣ ಪ್ರಾಣ ಬಿಡುವನು. ಆ ಪ್ರಾಣ ಕೇತಯ್ಯನನ್ನು ಹಿಂಬಾಲಿಸುತ್ತದೆ. ಬಸವಣ್ಣನ ನಿಷ್ಠೆ ಮೆಚ್ಚಿದ ಮಾಚಯ್ಯ, ಶಿವನನ್ನು ಕುರಿತು ಕೆರಳಿ ನುಡಿದು 'ಇಬ್ಬರ ' ಪ್ರಾಣಗಳನ್ನು ಶಿವನನ್ನು ಮರಳಿ ಪಡೆದನೆಂದು ತಿಳಿದು ಬರುತ್ತದೆ. ನಡೆ ನುಡಿಯಲ್ಲಿ ತಪ್ಪಿದ ವ್ಯಕ್ತಿ ಇಂಥವರೇ ಆಗಿರಲಿ ಆಚರಣೆ ಪ್ರಸಂಗ ಬಂದಾಗ 'ದೇವರನ್ನೂ' ಕೂಡಾ ಪ್ರಶ್ನಿಸುವ ಪ್ರವೃತ್ತಿ ಮಾಚಯ್ಯನದಾಗಿತ್ತು.
ಕಲ್ಯಾಣದ ಅನುಭವ ಮಂಟಪ ಕಟ್ಟುವಲ್ಲಿ ಮಡಿವಾಳ ಮಾಚಿದೇವರ ಕಾಯಕ ಅತಿ ಮಹತ್ವದ್ದು. ದೇಶದ ನಾನಾ ಭಾಗಗಳಿಂದ ಕಲ್ಯಾಣಕ್ಕೆ ಬರುವವರಿಗೆ ಪರೀಕ್ಷಿಸಿ , 'ಮಡಿ' ಹಾಸಿ ಸ್ವಾಗತಿಸುವ ಕೆಲಸ ಅವರದಾಗಿತ್ತು. ಮಾಚಿದೇವರ ಪರೀಕ್ಷೆಗೊಳಪಡದ ಹೊರತು ಕಲ್ಯಾಣಪುರ ಪ್ರವೇಶದ ಪ್ರಮಾಣ ಪತ್ರ ಹೊರಗಿನಿಂದ ಬರುವವರಿಗೆ ಸಿಗುತ್ತಿರಲಿಲ್ಲವೆಂಬುದು ಮಾಚಯ್ಯನ ಮಹಾ ಘನತೆಗೆ ಸಾಕ್ಷಿಯಾಗಿದೆ... ಗಣಾಚಾರ ಸಂಪನ್ನ ವೀರ ಶರಣ ಮಡಿವಾಳ ಮಾಚಿದೇವ. ಹಿಪ್ಪರಿಗೆಯಿಂದ ಕಲ್ಯಾಣಕ್ಕೆ ನಡೆದು ಬರುವಾಗ ಭೀಮರತಿ ಹೊಳೆ ಪ್ರವಾಹದಿಂದ ಕಟ್ಟಿರಲು, ಹರಿಗೋಲ ಹಂಗಿಲ್ಲದೆ ಶಿವನನ್ನು ನೆನೆಯಲು ನದಿ ಇಬ್ಬಾಗವಾಯ್ತು. ಆ ಮಾರ್ಗ ಮಧ್ಯದಿಂದ ಮಾಚಿ ತಂದೆ ನಡೆದು ಬರುತ್ತಾನೆ.. ಬಿಜ್ಜಳ ತನ್ನ ಬಟ್ಟೆಯನ್ನು ಮಡಿ ಮಾಡಿಸಿಕೊಡಲು ಬಸವಣ್ಣನಿಗೆ ದುಂಬಾಲು ಬಿದ್ದ. ಮಡಿವಾಳಯ್ಯ ಪರಮ ಭಕ್ತ , ಅವನನ್ನು ಅಗಸನೆಂದು ಭಾವಿಸದಿರಲು ಬಸವಣ್ಣ ತಿಳಿ ಹೇಳಿದ , ಅದನ್ನು ಲೆಕ್ಕಿಸದೆ ಮಾಸಿದ ಬಟ್ಟೆಗಳ ಗಂಟನ್ನು ಮಡಿ ಮಾಡಲು ಕಳಿಸಿದ. ಭವಿ ಬಿಜ್ಜಳನ ಮೈಲಿಗೆ ಬಟ್ಟೆಯ ಗಂಟನ್ನು ಕಂಡ ಮಡಿವಾಳಯ್ಯ ಕೋಪಗೊಂಡು ಸಿಟ್ಟಿನಿಂದ ನೋಡಲು ಆ ಕ್ಷಣದಲ್ಲಿ ಗಂಟು ಉರಿದು ಹೋಯ್ತು.
ಇದು ಮಡಿವಾಳಯ್ಯನ 'ಅಹಂಕಾರವೆಂದು' ಭಾವಿಸಿದ ಬಿಜ್ಜಳ ಅವರನ್ನು ಸೆರೆ ಹಿಡಿದು ತರಲು ಕುಂಟ ಕುರುಡರ ಪಡೆಯೊಂದನ್ನು ಕಳುಹಿಸಿದ. ಮಡಿವಾಳಯ್ಯ ತನ್ನ ಶಕ್ತಿಯಿಂದ ಕುರುಡರಿಗೆ ಕಣ್ಣು ಕಾಣುವಂತೆ ಮತ್ತು ಕುಂಟರಿಗೆ ಕಾಲು ಬರುವಂತೆ ಮಾಡಿ ಅಂಗ ಸೌಷ್ಟ ವರನ್ನಾಗಿ ಮಾಡಿ ಕಳುಹಿಸಿದ. ಇದರಿಂದ ಉರಿದೆದ್ದು ಬಿಜ್ಜಳ 'ಮದೋನ್ಮತ್ತ' ಆನೆಯನ್ನ ಮಾಚಯ್ಯನ ಮೇಲೆ ಹರಿ ಹಾಯಲು ಬಿಟ್ಟ. ಸೈನಿಕರ ತುಕಡಿಯೊಂದನ್ನೂ ಕಳುಹಿಸಿದ. ಆನೆ ಹಾಗೂ ಅವರನ್ನೆಲ್ಲ ಸದೆ ಬಡಿದು ಜಯ ಶಾಲಿಯಾದ. ಬಹುತೇಕ ಮಡಿವಾಳ ಬಂಧುಗಳ ಮನೆಯಲ್ಲಿ ಈ ಸನ್ನಿವೇಶದ ಫೋಟೋ ಇರುವುದು ಆದ್ರೆ ಬಹು ಜನರಿಗೆ ಅದರ ಹಿನ್ನೆಲೆ ಗೊತ್ತಿಲ್ಲ..ಕಾಲಾಂತರದಲ್ಲಿ ಬಿಜ್ಜಳನಿಗೆ ಮಾಚಿದೇವರ ಉನ್ನತ ಮಹಿಮೆ ತಿಳಿದು ತನ್ನ ತಪ್ಪಿನ ಅರಿವಾಗಿ ಬಿಜ್ಜಳ ಶರಣಾಗತನಾಗುವನು...
ಮುಂದೆ 'ಕಲ್ಯಾಣ ಕ್ರಾಂತಿ'ಯ ಸಂದರ್ಭದಲ್ಲಿ ಮಾಚಿದೆವರು ಹೊತ್ತ 'ಜವಾಬ್ಧಾರಿ' ಗುರುತರವಾದುದು. ಶರಣ ಧರ್ಮ ಸಂರಕ್ಷಣೆ ವಚನ ಸಾಹಿತ್ಯದ ರಕ್ಷಣೆಯ ದಂಡ ನಾಯಕತ್ವ ಜವಾಬ್ಧಾರಿ ಹೊತ್ತು , ಚನ್ನ ಬಸವಣ್ಣ , ಅಕ್ಕ ನಾಗಮ್ಮ, ಕಿನ್ನರಿ ಬೊಮ್ಮಣ್ಣ ಮೊದಲಾದವರೊಂದಿಗೆ ಮಾಚಿದೇವ ಶರಣ ಸಮೂಹದ 'ಭೀಮ ರಕ್ಷೆಯಾಗಿ' ನಿಂತರು. ಕಲಚೂರ್ಯ ರಾಯ ಮುರಾರಿಯನ್ನು ಎದುರಿಸಿ ಭೀಮ ನದಿಯನ್ನು ದಾಟಿ ತಲ್ಲೂರು, ಮುರಗೋಡ, ಕಡಕೋಳ,ತಡ ಕೋಡ, ಮೂಗ ಬಸವ, ಕಾತರವಳ್ಳಿಯಲ್ಲಿ ಅಲ್ಲಲ್ಲಿ ಕಾಳಗ ನಡೆಸಿದರು. ತಮ್ಮ ಧೈರ್ಯ, ಅನುಪಮ ಬಲದಿಂದ ಶರಣರನ್ನು, ವಚನ ಸಾಹಿತ್ಯವನ್ನು ರಕ್ಷಿಸಿ ಉಳಿವಿಗೆ ತಲುಪಿಸಿದ ಸಾಹಸಿ ಮಾಚಯ್ಯ. ಸಮಸ್ತ ಶರಣರು ಉಳಿವೆಯಲ್ಲಿ ಲಿಂಗೈಕ್ಯರಾಗಲು ತಮ್ಮ ಮಹಾನ್ ಕರ್ತವ್ಯ ಪೂರೈಸಿ ದೇವರ ಹಿಪ್ಪರಗಿ ಕಲಿದೇವರಲ್ಲಿ ಐಕ್ಯರಾದರು....
ಗುರುವಾದಡೂ ಬಸವಣ್ಣನಿಲ್ಲದೇ ಗುರುವಿಲ್ಲ
ಲಿಂಗವಾದಡೂ ಬಸವಣ್ಣನಿಲ್ಲದೇ ಲಿಂಗವಿಲ್ಲ
ಜಂಗಮವಾದಡೂ ಬಸವಣ್ಣನಿಲ್ಲದೇ ಜಂಗಮವಿಲ್ಲ
ಪ್ರಸಾದವಾದಡೂ ಬಸವಣ್ಣನಿಲ್ಲದೇ ಪ್ರಸಾದವಿಲ್ಲ
ಅನುಭವವಾದಡೂ ಬಸವಣ್ಣನಿಲ್ಲದೇ ನುಡಿಯಲಾಗದು
ಇಂತು ಸಂಗಿಸುವಲ್ಲಿ, ನಿಜ ಸಂಗಿಸುವಲ್ಲಿ
ಸುಸಂಗಿಸುವಲ್ಲಿ, ಮಹಾಸಂಗಿಸುವಲ್ಲಿ
ಪ್ರಸಾದ ಸಂಗಿಸುವಲ್ಲಿ ಕಲಿದೇವಾ
ಇಂತಹ ನಿಜ ಶರಣನೊಬ್ಬ ಹುಟ್ಟಿ ಈ ಭೂಮಿಯ ಮೇಲೆ ಮೇಲೂ ಕೀಳೆಂಬ ಭಾವನೆಯನ್ನು ಹೊಡೆದುಹಾಕಿ ದೇವರ ನಾಮವ ಜಪಿಸಿ ಮಾನವ ಕುಲಕೋಟಿ ಹಲವು ವಚನಗಳ ಮೂಲಕ ಭಕ್ತಿಪ್ರಿಯರನ್ನಾಗಿಸಿದ ಶ್ರೇಯಸ್ಸು ಮಡಿವಾಳ ಮಾಚಿದೇವರಿಗೆ ಸಲ್ಲುತ್ತದೆ. ಇಂದು ಮಡಿವಾಳ ಕುಲದಲ್ಲಿ ಜನ್ಮವೆತ್ತಿದ ಅನೇಕ ಮಕ್ಕಳು ತಮ್ಮ ಮಡಿವಾಳ ವೃತ್ತಿಯನ್ನೇ ತಮ್ಮ ಕಾಯಕವಾಗಿ ಆಯ್ಕೆ ಮಾಡಿಕೊಂಡು ಮುಂದಿನ ಜೀವನ ನಡೆಸುತ್ತಿದ್ದಾರೆ. ಮಡಿವಾಳ ವೃತ್ತಿ ಪವಿತ್ರವಾದದ್ದು ಅದರ ಜೊತೆಗೆ ಈ ಸಮಾಜದಲ್ಲಿ ಶಾಲೆ ಕಲಿಯದ ಮಕ್ಕಳ ಸಂಖ್ಯೆ ಹೆಚ್ಚಿದೆ ಅದಕ್ಕಾಗಿ ಮಾಚಿದೇವರ ಆಶೆಯದಂತೆ ಈ ಸಮಾಜದ ಎಲ್ಲಾ ಮಕ್ಕಳು ಸೂಕ್ತ ಶಾಲೆಯನ್ನು ಕಲಿತು ಜ್ಞಾನವಂತರಾಗಿ ದೇಶವನ್ನು ಕಟ್ಟು ಕೆಲಸದಲ್ಲಿ ಭಾಗಿಯಾಗಿ ದೊಡ್ಡ ವ್ಯಕ್ತಿಯಾಗಿ ಈ ದೇಶದ ಶಕ್ತಿಯಾಗಿ ಪರಿವರ್ತನೆ ಹೊಂದಬೇಕು ಎನ್ನುವುದೇ ನನ್ನ ಬರವಣಿಗೆಯ ಆಶೆಯ.